ನರೇಂದ್ರ ಮೋದಿ ವಿರುದ್ದ ವಿಪಕ್ಷಗಳ ಪ್ರಧಾನಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಗೊತ್ತೆ?

Differences-between-BJP-and-Congress

ಮುಂಬರುವ ಲೋಕಸಭೆ ಚುನಾವಣೆಗೆ ಒಮ್ಮತದ ಪ್ರಧಾನಿ ಅಭ್ಯರ್ಥಿ ಕೊರತೆಯನ್ನು ಪ್ರತಿಪಕ್ಷಗಳ ಪಾಳೆಯ ಎದುರಿ ಸುತ್ತಿರುವಾಗಲೇ, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆಯೂ ಆಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಲು ತಾವು ಹಿಂಜರಿಯುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಘೋಷಿಸಿದ್ದಾರೆ.

ತನ್ಮೂಲಕ ಇದೇ ಮೊದಲ ಬಾರಿಗೆ ಬೇರೊಂದು ಪಕ್ಷದ ಮುಖೇನ ಮಮತಾ ಬ್ಯಾನರ್ಜಿ ಅವರ ಹೆಸರು ಪ್ರಧಾನಿ ರೇಸ್‌ಗೆ ನಾಮ ನಿರ್ದೇಶನ’ವಾದಂತಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಜತೆಗೂಡಿ ಸರ್ಕಾರ ನಡೆಸುತ್ತಿರುವ ಜೆಡಿಎಸ್ ಪಕ್ಷದ ಮುಖ್ಯಸ್ಥರಾಗಿರುವ ಎಚ್. ಡಿ. ದೇವೇಗೌಡರು ಕಾಂಗ್ರೆಸ್ಸಿನ ರಾಹುಲ್ ಗಾಂಧಿ ಬದಲಿಗೆ ಮಮತಾ ಪರ ಬ್ಯಾಟ್ ಬೀಸಿರು ವುದು ಗಮನಾರ್ಹವಾಗಿದೆ.

ಪಿಟಿಐ ಸುದ್ದಿಸಂಸ್ಥೆಗೆ ಸಂದರ್ಶನ ನೀಡಿರುವ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಮತಾ ಬ್ಯಾನರ್ಜಿ ಅವರನ್ನು ಪ್ರಧಾನ ಮಂತ್ರಿ ಹುದ್ದೆಗೆ ಬಿಂಬಿಸಿದರೆ ಸ್ವಾಗತಿಸುತ್ತೇನೆ.

Leave a comment

Be the first to comment